ಬೆಂಗಳೂರು : ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ. ಅತ್ಯಂತ ಕಡಿಮೆ ಹಂತಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ. ನೋಂದಣಿ, ನವೀಕರಣ ಮುಂತಾದ ಎಲ್ಲ ಪ್ರಕ್ರಿಯೆಗಳು ಈಗಾಗಲೇ ಆನ್‌ಲೈನ್‌ನಲ್ಲಿ ಲಭ್ಯವಿದ್ದು, ಇನ್ನಷ್ಟು ಸುಧಾರಿತ ರೀತಿಯಲ್ಲಿ ಎಲ್ಲ ಸೇವೆಗಳು ಶೀಘ್ರದಲ್ಲಿಯೇ ಆನ್‌ಲೈನ್ ಮೂಲಕ ಲಭ್ಯವಾಗಲಿವೆ. ಕಡಿಮೆ ಸಮಯದಲ್ಲಿ ಹೆಚ್ಚು ಪಾರದರ್ಶಕವಾಗಿ ಸೇವೆಗಳು ಲಭ್ಯವಾಗುತ್ತವೆ. ಈ ಕುರಿತಾದ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ’ ಎಂದು ಸಚಿವ ನಾಗೇಶ್ ಅವರು ತಿಳಿಸಿದ್ದಾರೆ.