ಬೆಂಗಳೂರು: ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(SSLC time table 2023) ಪ್ರಕಟವಾಗಿದೆ. ಇಂದು (ಜನವರಿ 18) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು ಪರೀಕ್ಷೆಗಳು ಬೆಳಗ್ಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ನಡೆಯಲಿವೆ.
‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.
ಮಾರ್ಚ್ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
ಏಪ್ರಿಲ್ 3-ಗಣಿತ ಹಾಗೂ ಸಮಾಜ ಶಾಸ್ತ್ರ
ಏಪ್ರಿಲ್ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
ಏಪ್ರಿಲ್ 8-ಅರ್ಥಶಾಸ್ತ್ರ, ಏಪ್ರಿಲ್ 10-ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ
ಕಳೆದ ಅಕ್ಟೋಬರ್ 29 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿತ್ತು. ಅಲ್ಲದೇ ಇದಕ್ಕೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿತ್ತು.
ಇನ್ನು 2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ದಿನಾಂಕ 09-3-2023 ರಿಂದ 29-3-2023ರ ವರೆಗೆ ಪರೀಕ್ಷೆಗಳು ನಡೆಯಲಿವೆ
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…