ಶಿಕ್ಷಣ

CBSE 10ನೇ ತರಗತಿ ಫಲಿತಾಂಶ ಪ್ರಕಟ| ಶೇ.93.12 ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರೇ ಮೇಲುಗೈ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.

ಈ ವರ್ಷದ ಜನವರಿ 2-14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.

ಬಾಲಕಿಯರೇ ಮೇಲುಗೈ: 12ನೇ ತರಗತಿಯ ಫಲಿತಾಂಶದಂತೆ 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲೂ ಬಾಲಕಿಯರು ಮೇಲುಗೈ ಸಂಪಾದಿಸಿದ್ದಾರೆ. ಶೇ. 94.25ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದರೆ, ಶೇ.92.27ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌ ಗಳಾದ http://cbse.nic.in ಮತ್ತು http://cbse.gov.inನಲ್ಲಿ ಪೋಸ್ಟ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಲ್ಲಿ ಫಲಿತಾಂಶಗವನ್ನು ನೋಡಬಹುದು.

andolanait

Share
Published by
andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago