ಬೆಂಗಳೂರು : ಸಿಬಿಎಸ್‍ಇ ನಕಲಿ ಪ್ರಮಾಣ ಪತ್ರ ಮಾಡಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ರೂಪ್ಸಾ ಸಂಘಟನೆ ಅಧ್ಯಕ್ಷರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‍ಇ ನಕಲಿ ಪ್ರಮಾಣಪತ್ರ ಸಲ್ಲಿಸಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಪೆÇಲೀಸರು ಬಂಸಿ ವಿಚಾರಣೆ ನಡೆಸುತ್ತಿದ್ದಾರೆಂದರು.
ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಒತ್ತಾಯಿಸಿರುವ ಪ್ರಕರಣವನ್ನು ಸಿಬಿಐಗೆ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸಿಬಿಐಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಯಾರೂ, ಯಾರನ್ನು ತೇಜೊವಧೆ ಮಾಡಬಾರದು. ಯಾರೇ ಆದರೂ ಕಾನೂನು ಕೈಗೆತ್ತುಕೊಂಡರೆ ಪೆÇಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಚುನಾವಣೆ ಆಯೋಗದ ಸೂಚನೆ ಮೇರೆಗೆ ಸ್ಯಾಂಟ್ರೋ ರವಿ ಕೇಸ್ ತನಿಖಾಕಾರಿಯನ್ನು ನಾವು ವರ್ಗಾವಣೆ ಮಾಡಿಲ್ಲ. ವರ್ಗಾವಣೆ ಆಗಿದೆ. ಚುನಾವಣೆ ಆಯೋಗದ ನಿಯಮ ಕಠಿಣವಾಗಿದೆ. ಈ ನಿಯಮದ ಅಡಿ ವರ್ಗಾವಣೆ ಕ್ರಮ ಆಗಿದೆ ಎಂದು ಮತ್ತೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…