ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.
ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ.ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಈಚೆಗೆ ಅಭಿನಂದನಾ ಪತ್ರ ಬರೆದಿದ್ದಳು.
ಜನಪರ ಕಾರ್ಯ ಮುಂದುವರೆಸಿ: ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ಥಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.
ಸಾಮಾಜಿಕ ಕಳಕಳಿಯೊಂದಿಗೆ ಬರೆದಿರುವ ಈ ಪತ್ರವನ್ನು ಓದಿರುವ ಸಿದ್ದರಾಮಯ್ಯ, ಸಂತಸಗೊಂಡು ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಗೆ ಮರಳಿ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ.
ವಿದ್ಯಾರ್ಥಿನಿಯ ತಂದೆ ವಿಜಯಕುಮಾರ ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯೆ ವ್ಯಕ್ತವಾಗಿ ಸಿಎಂ ಕಚೇರಿಯಿಂದ ಮರಳಿ ಪತ್ರ ಬಂದಿರುವುದಕ್ಕೆ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹುಲಗಪ್ಪ ಕಟ್ಟಿಮನಿ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…