ಶಿಕ್ಷಣ

ಕೊಪ್ಪಳ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ: ಹಾರೈಸಿ ಮರುಪತ್ರ ಬರೆದ ಸಿಎಂ

ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.

ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ.ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಈಚೆಗೆ ಅಭಿನಂದನಾ ಪತ್ರ ಬರೆದಿದ್ದಳು.

ಜನಪರ ಕಾರ್ಯ ಮುಂದುವರೆಸಿ: ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ಥಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.

ಸಾಮಾಜಿಕ ಕಳಕಳಿಯೊಂದಿಗೆ ಬರೆದಿರುವ ಈ ಪತ್ರವನ್ನು ಓದಿರುವ ಸಿದ್ದರಾಮಯ್ಯ, ಸಂತಸಗೊಂಡು ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಗೆ ಮರಳಿ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ.

ವಿದ್ಯಾರ್ಥಿನಿಯ ತಂದೆ ವಿಜಯಕುಮಾರ ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯೆ ವ್ಯಕ್ತವಾಗಿ ಸಿಎಂ ಕಚೇರಿಯಿಂದ ಮರಳಿ ಪತ್ರ ಬಂದಿರುವುದಕ್ಕೆ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹುಲಗಪ್ಪ ಕಟ್ಟಿಮನಿ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Share
Published by
andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago