ಬೆಂಗಳೂರು: ‘ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)’ ಮೇ 28ರಂದು ಪ್ರವೇಶ ಪರೀಕ್ಷೆ ನಡೆಸಲು (ಯುಜಿಇಟಿ–2023) ನಿರ್ಧರಿಸಿದೆ.
150 ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ದೇಶದ 150ಕ್ಕೂ ಹೆಚ್ಚು ನಗರಗಳ 400 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏ. 24 ಕೊನೆಯ ದಿನ, ಪ್ರವೇಶ ಬಯಸುವ ಅಭ್ಯರ್ಥಿಗಳು www.comedk.org, www.unigauge.com ಸಂಪರ್ಕಿಸಬಹುದು.
ಸುಮಾರು ಒಂದು ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆ ಹೊಂದಿರುವುದಾಗಿ ಪರೀಕ್ಷಾ ನಿರ್ವಹಣಾ ಸಂಸ್ಥೆ ಹೇಳಿದೆ. ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ಕಲಿಕೆ ಜತೆಗೆ ಕೌಶಲ ತರಬೇತಿ ನೀಡಲಾಗುವುದು. ಅದಕ್ಕಾಗಿ ಬೆಂಗಳೂರಿನಲ್ಲಿ ನಾಲ್ಕು, ಮೈಸೂರು, ಕಲಬುರಗಿ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಎಂಟು ‘ಇನ್ನೋವೇಶನ್ ಹಬ್’ ಸ್ಥಾಪಿಸಲಾಗಿದೆ ಎಂದು ಕಾಮೆಡ್–ಕೆ ಮಾಹಿತಿ ನೀಡಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…