ಶಿಕ್ಷಣ

ಬೆಂಗಳೂರು ಬಳಿ ಶೈಕ್ಷಣಿಕ ನಗರ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಬಳಿ ಶೈಕ್ಷಣಿಕ ನಗರ(ಜ್ಞಾನಾಧಾರಿತ ನಗರ) ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನವೀಕೃತ ಆವರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಬಳಿ 2000 ಎಕರೆ ಪ್ರದೇಶದಲ್ಲಿ ನಾಲೆಡ್ಜ್ ಸಿಟಿ ಮಾಡಲು ತೀರ್ಮಾನ ಮಾಡಲಾಗಿದೆ. ಅಲ್ಲಿ ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬರುವಂತಾಗಬೇಕು. ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ದೇಶ-ವಿದೇಶಗಳ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸಂಶೋಧನೆ ಮಾಡಬಹುದು. ಹಾಗೆಯೇ ಅತ್ಯುತ್ತಮ ಶಿಕ್ಷಣವನ್ನು ಪಡೆಯಬಹುದು ಎಂದರು.

ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಆರು ವಿಶ್ವವಿದ್ಯಾಲಯಗಳು ಇವೆ. ಹೀಗಾಗಿ ಹೊಸ ಶೈಕ್ಷಣಿಕ ಜಿಲ್ಲೆಯನ್ನು ಪೋಷಣೆ ಮಾಡಲಾಗಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ವಿದ್ಯಾರ್ಥಿಗಳು ತಮಿಗಿಷ್ಟವಿರುವ ವಿಷಯವನ್ನ ಅಭ್ಯಸಿಸಬಹುದು. ಬಹುಶಿಸ್ತೀಯ ವಿಷಯಗಳನ್ನು ಆಯ್ಕೆ ಮಾಡಲು ಆಕಾಶವಿದೆ ಎಂದು ತಿಳಿಸಿದರು.

ಈ ವಿಶ್ವ ವಿದ್ಯಾಲಯ ಅತ್ಯಂತ‌ಮಹತ್ವದ್ದಾಗಿದೆ.‌ ಈ ವಿಶ್ವ ವಿದ್ಯಾಲಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತಂದಿದ್ದೇವೆ. ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಅನುಕೂಲವಾಗಿದೆ. ರಾಷ್ಟ್ರೀಯ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ ಎಂದರು.

ಈ ಯೋಜನೆಗೆ ಯುವಕರಿಂದ ಸಾಕಷ್ಟು ಉತ್ಸಾಹ ಮೂಡಿದೆ. ಈಗ ಬದಲಾದ ಪದ್ದತಿಯಲ್ಲಿ ವಿದ್ಯಾರ್ಥಿಗಳು ಕಲೆಯಿಂದ ವಿಜ್ಞಾನ, ವಿಜ್ಞಾನದಿಂದ ವಾಣಿಜ್ಯ ಕಲಿಯಬಹುದು. ಇದೊಂದು ರೀತಿಯಲ್ಲಿ ಹೊಸ ಪ್ರಯೋಗ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ‌ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಇತಿಹಾಸವಿರುವ ಸಂಸ್ಥೆ ಇದು. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಹಲವರು ಬಹಳ ದೊಡ್ಡ ಸಾಧನೆ ಮಾಡಿದ್ದಾರೆ. ಅಂತಹವರ ಸಾಲಿಗೆ ಇನ್ನಷ್ಟು ವಿದ್ಯಾರ್ಥಿಗಳು ಸೇರುವಂತಾಗಲಿ ಎಂದು ಆಶಿಸಿದರು‌. ಬೆಂಗಳೂರು ನಗರ ವಿಶ್ವ ವಿದ್ಯಾಲಯ ಅದ್ಭುತ ಸ್ಥಳದಲ್ಲಿದೆ. ವಿದ್ಯಾರ್ಥಿಗಳ ಸ್ನೇಹಿಯಾಗಿ ಶೈಕ್ಷಣಿಕ ಜಿಲ್ಲೆಯನ್ನಾಗಿ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಲಿಂಗರಾಜಗಾಂಧಿ, ಕುಲಸಚಿವ(ಆ) ಸಿ.ಎನ್.ಶ್ರೀಧರ, ಕುಲಸಚಿವ(ಮೌ) ಡಾ.ವಿ.ಲೋಕೇಶ, ವಿತ್ತಾಧಿಕಾರಿ ರಘು ಜಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

andolanait

Share
Published by
andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago