2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ
ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್‌ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರ ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್‌ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…