ಶಿಕ್ಷಣ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್

2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ

ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್‌ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು  ಕಾರ್ಯಭಾರ  ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ  ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ತಿದ್ದುಪಡಿ  ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್‌ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

12 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

14 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

15 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

17 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

25 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

37 mins ago