ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಫೇಲ್‍ ಆದವರೇ ಹೆಚ್ಚು!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದ್ದು, 5,507 ಮಾತ್ರ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.

× Chat with us