ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ-2022’ಕ್ಕೆ ಉಭಯ ಸದನಗಳಲ್ಲಿ ಅಂಗೀಕಾರ ದೊರಕಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ತಿಳಿಸಿದ್ದಾರೆ.
ಈ ಮೂಲಕ ಶಿಕ್ಷಕರ ಹಲವು ವರ್ಷಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುತ್ತಿದೆ ಎಂದು ತಿಳಿದಿದ್ದಾರೆ.
ಜೊತೆಗೆ ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಎಂಬ ಮಿತಿಯನ್ನು ತೆಗೆದು ಹಾಕಲಾಗಿದೆ.
ಕಲ್ಯಾಣ ಕರ್ನಾಟಕ, ಮಲೆನಾಡು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ಗಳಿಗೆ ವರ್ಗಾವಣೆಯಾಗುವ ಶಿಕ್ಷಕರಿಗೆ ವರ್ಗಾವಣೆ ಮಿತಿ ಸಡಿಲಿಸಲಾಗಿದೆ. ಶೇ.25ಕ್ಕಿಂತ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇರುವ ‘ಬ್ಲಾಕ್ಗಳ ಒಳಗೆ’ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಮರು ಹೊಂದಾಣಿಕೆ ಸಂದರ್ಭದಲ್ಲಿ ಶಿಕ್ಷಕರು ಹಿಂದಿನ ಶಾಲೆಗಳಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಲಾಗುತ್ತದೆ. ಎಂದು ತಿಳಿಸಿದ್ದಾರೆ.
ಪತಿ-ಪತ್ನಿ ಪ್ರಕರಣದಲ್ಲಿ ಶೈಕ್ಷಣಿಕ ತಾಲೂಕಿನಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ಆ ಜಿಲ್ಲೆಯ ಬೇರೆ ತಾಲೂಕಿನಲ್ಲೂ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಶಾಲೆಗಳಿಗೆ ಮರು ವರ್ಗಾವಣೆ ಬಯಸುವವರಿಗೆ ಆದ್ಯತೆಗಳನ್ನು ಪರಿಗಣಿಸಲಾಗುವುದು.
ಶೇ.25ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇರುವ ಬ್ಲಾಕ್ನಲ್ಲಿ ಒಂದೇ ವೃಂದದಲ್ಲಿ 10 ವರ್ಷ ನಿರಂತರ ಸೇವೆ & ಎಲ್ಲ ವೃಂದಗಳಲ್ಲಿ 15 ವರ್ಷ ನಿರಂತರ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಬ್ಲಾಕ್ನಿಂದ ಹೊರಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ನಿಯಮಗಳನ್ನು ರೂಪಿಸಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಮಾಡಲಾಗುವುದು. ಎಂದು ಬಿ ಸಿ ನಾಗೇಶ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.