3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ
ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು ಹೇಳಿದ್ದಾರೆ.
ಸದ್ಯ ೪ ವರ್ಷದ ಪದವಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ೩ ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ . ಮುಂದೆ ಮೂರು ವರ್ಷಗಳ ಆನರ್ಸ್ ಪದವಿ ಕಲಿಸಬೇಕಾ ಅಥವಾ ನಾಲ್ಕು ವರ್ಷಗಳ ಪದವಿ ನೀಡಬೇಕಾ ಎಂಬ ಕುರಿತು ವಿಶ್ವವಿದ್ಯಾಲಯಗಳೇ ನಿರ್ಧರಿಸಿಕೊಳ್ಳಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಘೋಷಿಸಲಾದ ಪದವಿ ಕೋರ್ಸ್‌ಗಳಿಗೆ ಹೊಸ ಪಠ್ಯಕ್ರಮದ ಚೌಕಟ್ಟಿನಲ್ಲಿ ಆನರ್ಸ್ ಪದವಿ ಕಾರ್ಯಕ್ರಮವನ್ನು ನಾಲ್ಕು ವರ್ಷಗಳ ಕಾರ್ಯಕ್ರಮಗಳು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಎಚ್‌ಡಿ ಮಾಡಲು ನೀಡಲಾದ ವಿಷಯಗಳಲ್ಲಿ ಆಳವಾದ ಜ್ಞಾನ ಪಡೆಯಲು ಒಂದು ಅಥವಾ ಎರಡು ವಿಷಯಗಳನ್ನು ಮೇಜರ್ ಆಗಿ ಪಡೆದುಕೊಳ್ಳಬಹುದು. ಬಹುಶಿಸ್ತೀಯ ಕೋರ್ಸ್‌ಗಳು, ಸಾಮರ್ಥ್ಯ ವರ್ಧನೆಯ ಕೋರ್ಸ್‌ಗಳು, ಕೌಶಲ್ಯ ವರ್ಧನೆಯ ಕೋರ್ಸ್‌ಗಳು, ಮೌಲ್ಯವರ್ಧಿತ ಕೋರ್ಸ್‌ಗಳು ಮತ್ತು ಇಂಟರ್ನ್‌ಶಿಪ್‌ಗಳು ನಾಲ್ಕು ವರ್ಷದ ಪದವಿ ಕೋರ್ಸುಗಳಲ್ಲಿ ಅಂತರ್ಗತವಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಥವಾ ಉನ್ನತ ವ್ಯಾಸಂಗಕ್ಕೆ ಹೋಗಲು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.
೩ ವರ್ಷದ ಪದವಿ ಸ್ಥಗಿತವಿಲ್ಲ
ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆ ಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…