ಶಿಕ್ಷಣ

4 ವರ್ಷ ಪದವಿ ಓದಿದವರು ಇನ್ಮುಂದೆ ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು!

3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ

ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು ಹೇಳಿದ್ದಾರೆ.
ಸದ್ಯ ೪ ವರ್ಷದ ಪದವಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ೩ ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ . ಮುಂದೆ ಮೂರು ವರ್ಷಗಳ ಆನರ್ಸ್ ಪದವಿ ಕಲಿಸಬೇಕಾ ಅಥವಾ ನಾಲ್ಕು ವರ್ಷಗಳ ಪದವಿ ನೀಡಬೇಕಾ ಎಂಬ ಕುರಿತು ವಿಶ್ವವಿದ್ಯಾಲಯಗಳೇ ನಿರ್ಧರಿಸಿಕೊಳ್ಳಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಘೋಷಿಸಲಾದ ಪದವಿ ಕೋರ್ಸ್‌ಗಳಿಗೆ ಹೊಸ ಪಠ್ಯಕ್ರಮದ ಚೌಕಟ್ಟಿನಲ್ಲಿ ಆನರ್ಸ್ ಪದವಿ ಕಾರ್ಯಕ್ರಮವನ್ನು ನಾಲ್ಕು ವರ್ಷಗಳ ಕಾರ್ಯಕ್ರಮಗಳು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಎಚ್‌ಡಿ ಮಾಡಲು ನೀಡಲಾದ ವಿಷಯಗಳಲ್ಲಿ ಆಳವಾದ ಜ್ಞಾನ ಪಡೆಯಲು ಒಂದು ಅಥವಾ ಎರಡು ವಿಷಯಗಳನ್ನು ಮೇಜರ್ ಆಗಿ ಪಡೆದುಕೊಳ್ಳಬಹುದು. ಬಹುಶಿಸ್ತೀಯ ಕೋರ್ಸ್‌ಗಳು, ಸಾಮರ್ಥ್ಯ ವರ್ಧನೆಯ ಕೋರ್ಸ್‌ಗಳು, ಕೌಶಲ್ಯ ವರ್ಧನೆಯ ಕೋರ್ಸ್‌ಗಳು, ಮೌಲ್ಯವರ್ಧಿತ ಕೋರ್ಸ್‌ಗಳು ಮತ್ತು ಇಂಟರ್ನ್‌ಶಿಪ್‌ಗಳು ನಾಲ್ಕು ವರ್ಷದ ಪದವಿ ಕೋರ್ಸುಗಳಲ್ಲಿ ಅಂತರ್ಗತವಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಥವಾ ಉನ್ನತ ವ್ಯಾಸಂಗಕ್ಕೆ ಹೋಗಲು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.
೩ ವರ್ಷದ ಪದವಿ ಸ್ಥಗಿತವಿಲ್ಲ
ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆ ಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

49 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

51 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

53 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

54 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

1 hour ago