ಬೆಂಗಳೂರು : ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ.
ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶ ನೀಡಿದ್ದು, ಮಧ್ಯಾಹ್ನಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆ ಸ್ವೀಕರಿಸಲಾಗಿದೆ. ಹೀಗಾಗಿ ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.
ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ಹೇಳಿದ್ದಾರೆ.
ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್‍ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ.
ಆದರೆ ಮೊಟ್ಟೆ ವಿತರಣೆ ಯೋಜನೆ ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್‍ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…