Mysore
25
moderate rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಸರ್ಕಾರಿ ಶಾಲಾ ದಾಖಲಾತಿ ಏರಿಕೆ ಖಾಸಗಿ ಇಳಿಕೆ.

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ

ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವುದರಿಂದ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.

ಕೊರೊನಾ ಕಾರಣದಿಂದ ಪೋಷಕರ ಆದಾಯ ಕಡಿಮೆಯಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಶೇ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಿ ಶಾಲೆಗಳ ಗುಣಮಟ್ಟವೂ ಇತ್ತೀಚೆಗೆ ಸುಧಾರಿಸಿದೆ. ರಾಜಕಾರಣಿಗಳೂ ಸೇರಿದಂತೆ ಹಲವರು ಸರ್ಕಾರಿ ಶಾಲೆಗಳನ್ನು ದತ್ತುಪಡೆಯುತ್ತಿದ್ದಾರೆ. ಇದರಿಂದ ಶಾಲೆಗಳ ಮೂಲಸೌಕರ್ಯವೂ ತಕ್ಕಮಟ್ಟಿಗೆ ಸುಧಾರಿಸಿದೆ. ಹೀಗಾಗಿ ಜನರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ