ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ
ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವುದರಿಂದ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.
ಕೊರೊನಾ ಕಾರಣದಿಂದ ಪೋಷಕರ ಆದಾಯ ಕಡಿಮೆಯಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಶೇ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಶಾಲೆಗಳ ಗುಣಮಟ್ಟವೂ ಇತ್ತೀಚೆಗೆ ಸುಧಾರಿಸಿದೆ. ರಾಜಕಾರಣಿಗಳೂ ಸೇರಿದಂತೆ ಹಲವರು ಸರ್ಕಾರಿ ಶಾಲೆಗಳನ್ನು ದತ್ತುಪಡೆಯುತ್ತಿದ್ದಾರೆ. ಇದರಿಂದ ಶಾಲೆಗಳ ಮೂಲಸೌಕರ್ಯವೂ ತಕ್ಕಮಟ್ಟಿಗೆ ಸುಧಾರಿಸಿದೆ. ಹೀಗಾಗಿ ಜನರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…