ಶಿಕ್ಷಣ

ಭವಿಷ್ಯದ ಬಾಗಿಲು ತೆರೆಯುವುದು ಪದವಿಗಳಲ್ಲ, ಕೌಶಲ್ಯತೆ : ಡಾ. ಶರಣಪ್ರಕಾಶ್‌ ಪಾಟೀಲ್

ಕೊಚ್ಚಿ : ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು.

ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು.

ವೈಫಲ್ಯ ಅಂತ್ಯವಲ್ಲ, ಯಶಸ್ಸಿನ ಮೆಟ್ಟಿಲು
“ವೈಫಲ್ಯವು ಅಂತ್ಯವಲ್ಲ – ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು ಕಾಣುವ, ಮತ್ತು ಕಾರ್ಯನಿರ್ವಹಿಸುವ ಧೈರ್ಯವನ್ನು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಔಪಚಾರಿಕ ಪದವಿಗಳು ಭವಿಷ್ಯಕ್ಕೆ ದಾರಿ ತೋರುತ್ತವೆ. ಆದರೆ ನಿಜವಾದ ಯಶಸ್ಸಿನ ಬಾಗಿಲುಗಳನ್ನು ತೆರೆಯುವುದು ಕೌಶಲ್ಯತೆ. ಇದು ಆತ್ಮವಿಶ್ವಾಸ, ಘನತೆ ಮತ್ತು ಸ್ವಾತಂತ್ರ್ಯವನ್ನು ತುಂಬುತ್ತದೆ. ಅದನ್ನು ಉನ್ನತ ಶಿಕ್ಷಣದೊಂದಿಗೆ ಸಂಯೋಜಿಸಿದಾಗ, ಉದ್ಯೋಗಕ್ಕೆ ಅರ್ಹರಾಗುವುದಲ್ಲದೆ, ಇತರರಿಗೆ ಉದ್ಯೋಗಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ರೂಪಿಸಬಹುದು” ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಶಿಕ್ಷಣ ಕೇವಲ ಪರೀಕ್ಷಾ ತಯಾರಿಗೆ ಸೀಮಿತ ಆಗಬಾರದು
ಕೇರಳದ ಸಾಕ್ಷರತೆ ಮತ್ತು ಪ್ರಗತಿಪರ ಮನೋಭಾವ ಇಡೀ ದೇಶಕ್ಕೆ ಮಾದರಿ. ಶಿಕ್ಷಣವು ಕೇವಲ ಪರೀಕ್ಷಾ ತಯಾರಿಗೆ ಸೀಮಿತವಾಗಿರಬಾರದು. ಉದ್ಯೋಗದ ಭವಿಷ್ಯವನ್ನು ಪದವಿಗಳಿಂದ ವ್ಯಾಖ್ಯಾನಿಸಲಾಗುವುದಿಲ್ಲ, ಆದರೆ ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ, ಸಹಯೋಗ ಮತ್ತು ನಾವೀನ್ಯತೆಯಿಂದ ಗುರುತಿಸಲಾಗುತ್ತದೆ. ಡಿಜಿಟಲ್ ತಂತ್ರಜ್ಞಾನಗಳು, ಯಾಂತ್ರೀಕತೆ, ಕೃತಕ ಬುದ್ಧಿಮತ್ತೆ ಮತ್ತು ಹೊಸ ವ್ಯವಹಾರ ಮಾದರಿಗಳೊಂದಿಗೆ ಕೌಶಲ್ಯಗಳು ಭವಿಷ್ಯದ ನಿಜವಾದ ಹೆಬ್ಬಾಗಿಲು ಆಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, ಉದ್ಯಮ ನಾಯಕರು, ತರಬೇತಿ ಸಂಸ್ಥೆಗಳು, ಶೈಕ್ಷಣಿಕ ಅಧ್ಯಾಪಕರು, ಅಂತರರಾಷ್ಟ್ರೀಯ ಸಂಸ್ಥೆಗಳು, ನಾವೀನ್ಯಕಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 2,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕೇರಳದ ಉನ್ನತ ಶಿಕ್ಷಣ ಸಚಿವರಾದ ಡಾ. ಆರ್. ಬಿಂದು, ಕೈಗಾರಿಕೆ ಸಚಿವ ಪಿ. ರಾಜೀವ್, ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ. ರಾಜೇಶ್ ಸೇರಿದಂತೆ ಹಲವು ಗಣ್ಯರು, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

10 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

14 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

14 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

20 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

20 hours ago