ಬೆಂಗಳೂರು -86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದ್ದು,
ಜನವರಿ 6 ರಿಂದ 8 ರ ವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಸುವುದಕ್ಕೆ ರಾಜ್ಯ ಸರಕಾರ ಬುಧವಾರ ನಿರ್ಧರಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ದಿನಾಂಕ ನಿಗದಿ ಮಾಡಿದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅನುಮೋದನೆ ಪಡೆದು ಸಚಿವ ಸುನೀಲ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ.
ಈ ಸಮ್ಮೇಳನದಲ್ಲಿ 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬಹಳ ಅದ್ದೂರಿಯಾಗಿ ೮೬ ನೇ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಸಂಬಂಧ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಕರ ಜತೆಗೆ ಚರ್ಚೆ ನಡೆಸುವುದಕ್ಕಾಗಿ ಅಕ್ಟೋಬರ್ 20 ರಂದು ಹಾವೇರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಯಾವುದೇ ನ್ಯೂನ್ಯತೆ ಇಲ್ಲದಂತೆ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸುನೀಲ್ ಕುಮಾರ್ ತಿಳಿಸಿದರು.
ಸಮ್ಮೇಳನ ಹಿನ್ನೆಲೆಯಲ್ಲಿ ೪೫ ದಿನಗಳ ಕಾಲ ಕನ್ನಡ ರಥ ಇಡಿ ರಾಜ್ಯಾದ್ಯಂತ ಮೆರವಣಿಗೆ ನಡೆಸುತ್ತದೆ. 3೦ ರಿಂದ 4೦ ಸಾವಿರ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ ೨.೫೦ ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. 86ನೇ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ 6 ಸಾಧಕರಿಗೆ ಈ ಬಾರಿ ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.
ಸಮ್ಮೇಳನದ ಭಾಗವಾಗಿ20 ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ನಾನಾ ಘೋಷ್ಠಿಗಳು, ಪುಸ್ತಕ ಪ್ರದರ್ಶನದ ಜತೆಗೆ ಸಾಹಿತ್ಯಕ್ಕೆ ಸಂಬಂಧಪಟ್ಟ ಅನೇಕ ಚಟುವಟಿಕೆಗಳು ನಡೆಯುತ್ತವೆ ಎಂದು ಹೇಳಿದರು.
ಉದ್ಘಾಟನೆಗೆ 5೦ ಸಾವಿರ ಜನ :
ಉದ್ಘಾಟನಾ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಸುಮಾರು 3೦ ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಇರುವ ಬೃಹತ್ ಸಭಾಂಗಣ ನಿರ್ಮಿಸಲಾಗಿವುದು. ಹಿಂದೆಂದೂ ಕಾಣದಷ್ಟು ಅಚ್ಚುಕಟ್ಟಾಗಿ ಸಮ್ಮೇಳನ ಯಶಸ್ವಿಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಿಸಿದ ಸಚಿವ ವಿ.ಸುನೀಲ್ ಕುಮಾರ್
Previous Articleಸಹಜ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ʼಜೀವ ಜಗತ್ತುʼ ಪುಸ್ತಕ ಬಿಡುಗಡೆ
Next Article ಹಿಜಾಬ್ ವಿವಾದದ ಕುರಿತು ನಾಳೆ ಅಂತಿಮ ತೀರ್ಪು ಪ್ರಕಟ