ಮೈಸೂರು : 2023-24ನೇ ಶೈಕ್ಷಣಿಕ ಸಾಲಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ, ಜುಲೈ ಆವೃತ್ತಿಗೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ ಕೋರ್ಸ್‌ಗಳು ಮತ್ತು ವಿವಿಧ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಪ್ರವೇಶ ಪ್ರಕ್ರಿಯೆ ಜೂನ್ 30, 2023 ರಿಂದ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿದ್ದು, ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC)ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ, ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ ಇನ್ನೂಂದು ಕೋರ್ಸ್‌ಗಳನ್ನು ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಅಧ್ಯಯನ ಮಾಡಲು ಅವಕಾಶ ಇರುತ್ತದೆ.
ಅಭ್ಯರ್ಥಿಗಳಿಗೆ 30-06-2023 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿವಿಯ ಅಧಿಕೃತ ಅಡ್ಮಿಷೆನ್ ಪೋರ್ಟಲ್ http://ksouportal.com/views/StudentHome.aspx ಅಥವಾ www.ksoumysuru.ac.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯಾ ಕೋರ್ಸ್‌ಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಯನುಸಾರ ದಾಖಲಾತಿಗಳೊಂದಿಗೆ ವಿವಿ ನಿಲಯದ ಕೇಂದ್ರ ಕಚೇರಿ ಮೈಸೂರು, ವಿವಿಧ ಪ್ರಾದೇಶಿಕ ಕೇಂದ್ರಗಳು ಮತ್ತು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ. ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ.
ಪದವಿ ಕೋರ್ಸ್‌ಗಳಾದ, ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿಎಸ್ಸಿ ಸಾಮಾನ್ಯ, ಬಿಎಸ್ಸಿ ಹೋಮ್ ಸೈನ್ಸ್, ಬಿಎಸ್ಸಿ ಇನ್‌ಫರ್‌ಮೇಷನ್ ಸೈನ್ಸ್, ಬಿಸಿಎ, ಬಿಬಿಎ- ಮಾರ್ಕೆಟಿಂಗ್, ಹಾಗು ಪಿಜಿ ಕೋರ್ಸ್‌ಗಳಾದ ಎಂ.ಎ -ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಉರ್ದು, ತೆಲಗು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಶಿಕ್ಷಣ. ಎಂ. ಕಾಂ., ಎಂಬಿಎ, ಎಂಲಿಬ್‌ಐಎಸ್ಸಿ
ಎಂಎಸ್ಸಿ ಕೋರ್ಸ್‌ಗಳು – ಜೀವ ರಸಾಯನಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್, ಪರಿಸರ ವಿಜ್ಞಾನ, ಕಂಪ್ಯೂಟರ್ ವಿಜ್ಞಾನ, ಭೂಗೋಳ ಶಾಸ್ತ್ರ, ಮಾಹಿತಿ ವಿಜ್ಞಾನ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೌತಶಾಸ್ತ್ರ, ಮನೋವಿಜ್ಞಾನ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಫುಡ್ ಅಂಡ್ ನ್ಯೂಟ್ರಿಷನ್ ಸೈನ್ಸ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಕೋರ್ಸ್‌ಗಳು
ಪಿ.ಜಿ ಡಿಪ್ಲೊಮಾ ಕೋರ್ಸ್‌ಗಳು : ಕಮ್ಯೂನಿಕೇಟಿವ್ ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಇಂಗ್ಲಿಷ್, ಕುವೆಂಪು ಸಾಹಿತ್ಯ, ವ್ಯವಹಾರಿಕ ಕಾನೂನು, ವ್ಯವಹಾರಿಕ ನಿರ್ವಹಣೆ, ಮಾನವ ಸಂಪನ್ಮೂಲ ನಿರ್ವಹಣೆ, ಹಣಕಾಸು ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣಾಶಾಸ್ತ್ರ, ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್ , ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್.
ಡಿಪ್ಲೊಮಾ ಕೋರ್ಸ್‌ಗಳು (10+2 ಆಧಾರಿತ) – ಡಿಪ್ಲೊಮಾ -ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಅಂಡ್ ಹೆಲ್ತ್ ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಷನ್. ಅರ್ಲಿ ಚೈಲ್ಡ್‌ಹುಡ್ ಕೇರ್ ಅಂಡ್ ಎಜುಕೇಷನ್.
ಯುಜಿ ಸರ್ಟಿಫಿಕೇಟ್ ಕೋರ್ಸ್‌ಗಳು (10+2 ಆಧಾರಿತ)- ಪಂಚಾಯತ್ ರಾಜ್, ಮಾಹಿತಿ ಸಂವಹನ ತಂತ್ರಜ್ಞಾನ, ನ್ಯೂಟ್ರಿಷನ್ ಅಂಡ್ ಫುಡ್, ಇಂಗ್ಲಿಷ್, ಎಂಪ್ಲಾಯ್‌ಮೆಂಟ್ ಮತ್ತು ಎಮಟರ್‌ಪ್ರೆನ್ಯುರ್‌ಷಿಪ್.
ಮೇಲೆ ತಿಳಿಸಿದ ಯಾವುದೇ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಂತರ ಕಡ್ಡಾಯವಾಗಿ ನಿಮ್ಮ ಹತ್ತಿರದ ಪ್ರಾದೇಶಿಕ ಕೇಂದ್ರಕ್ಕೆ ಅಥವಾ KSOU ಕೇಂದ್ರ ಕಚೇರಿ ಮೈಸೂರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ನಂತರ ಡೇಬಿಟ್ ಕಾರ್ಡ್/ ಕ್ರೇಡಿಟ್ ಕಾರ್ಡ್ ಮೂಲಕ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆದುಕೋಳ್ಳಬಹುದು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕರಾಮುವಿ ಆನ್‌ಲೈನ್ ಪೋರ್ಟಲ್ ಡೈರೆಕ್ಟ್ ಲಿಂಕ್ http://ksouportal.com/views/StudentHome.aspx ಅಥವಾ www.ksoumysuru.ac.in ಗೆ ಭೇಟಿ ನೀಡಿ.
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತ…
ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ.…
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು.…
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್…
ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ…