Mysore
24
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ಶೀಘ್ರವೇ SC,ST ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌!

ಹಣಕಾಸು ಇಲಾಖೆಗೆ 225 ಕೋಟಿ ರೂ. ಪ್ರಸ್ತಾವನೆ : ಡಾ.ಸಿಎನ್‌ಎ

ಬೆಳಗಾವಿ-ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಲ್ಯಾಪ್ ಟಾಪ್ ವಿತರಣೆಯು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಕಾರ್ಯಕ್ರಮವಾಗಿದೆ. ನಾವು ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅಲ್ಲಿಂದ ಅನುಮೋದನೆ ಸಿಕ್ಕ ತಕ್ಷಣವೇ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಲ್ಯಾಪ್‌ಟಾಪ್ ವಿತರಣೆಗಾಗಿ 225 ಕೋಟಿ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಲ್ಲಿ 80 ಕೋಟಿ ಅನುಮೋದನೆ ನೀಡಲಾಗಿದೆ. ಉಳಿದಿದ್ದನ್ನು ತ್ವರಿತವಾಗಿ ವಿತರಣೆ ಮಾಡುತ್ತೇವೆ ಎಂದರು.
ಏಳು ವಿಶ್ವವಿದ್ಯಾನಿಲಯಕ್ಕೆ ಲ್ಯಾಪ್ಟಾಪ್ ವಿತರಿಸಲು 1.45 ಕೋಟಿ ಹಣವನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಇದು ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮವಾಗಿದ್ದು, ನಾವು ನಮ್ಮ ಇಲಾಖೆಯಿಂದ ಪ್ರಸ್ತಾವನೆ ಸಿದ್ದಪಡಿಸಿ ಆರ್ಥಿಕ ಇಲಾಖೆಗೆ ಕಳುಹಿಸುತ್ತೇವೆ ಎಂದರು.

ತಡವರಿಸಿದ ಸಚಿವರು: ಇದಕ್ಕೂ ಮುನ್ನ ಸಚಿವ ಅಶ್ವಥ್ ನಾರಾಯಣ ಅವರು ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲು ತಡವರಿಸಿದರು. ಒಂದು ಹಂತದಲ್ಲಿ ಲ್ಯಾಪ್ಟಾಪ್ ವಿತರಣೆಗೆ 1.45 ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ಹೇಳಿದಾಗ, ಸದಸ್ಯರಾದ ಪ್ರಿಯಾಂಕ ಖರ್ಗೆ, ಅಬ್ಬಯ್ಯ ಪ್ರಸಾದ್, ಶಿವಾನಂದ್ ಪಾಟೀಲ್ ಸೇರಿದಂತೆ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿದರು.
ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸಾವಿರಾರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಕೇವಲ 1.45 ಕೋಟಿ ಎಲ್ಲಿ ಸಾಕಾಗುತ್ತದೆ. ನಾವು ಪ್ರತಿಯೊಂದು ವಿಷಯಕ್ಕೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ. ಸರಿಯಾದ ಮಾಹಿತಿ ನೀಡಲು ನಿರ್ದೇಶನ ನೀಡಬೇಕೆಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.
ಆಗ ಸಭಾಧ್ಯಕ್ಷರಾದ ಕಾಗೇರಿ ಅವರು ಅಕಾರಿಗಳು ನೀಡಿರುವ ಮಾಹಿತಿಯನ್ನು ಸಚಿವರು ಸದನದಲ್ಲಿ ತಿಳಿಸಿದ್ದಾರೆ. ಹೆಚ್ಚು ಚರ್ಚೆ ಬೇಡ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!