ಶಿಕ್ಷಣ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ತಾತ್ಕಾಲಿಕ ಪಟ್ಟಿ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯನ್ನು ಗಮನದಲ್ಲಿಟ್ಟು ಕೆಲಸ ಮಾಡುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನವೆಂವರ್‌ 14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಶುಕ್ರವಾರ (ನವೆಂವರ್‌ 18) 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ 1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

andolanait

Share
Published by
andolanait

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

1 hour ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago