ತುಮಕೂರು: ಜಿಲ್ಲೆಯಲ್ಲಿ ಫೆ. 21ರಂದು ಮಂಗಳವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆ ಮಾರ್ಚ್ 6ರಂದು ನಡೆಯಲಿದೆ.
ಪ್ರಥಮ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಕೆಲವೆಡೆ ವಾಟ್ಸ್ ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಸೋರಿಕೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಪರೀಕ್ಷೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ಣ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ತಿಳಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಸೈಬರ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಲಾಗಿದೆ ಎಂದು ಹೇಳಿದರು.
ಪರೀಕ್ಷೆಗೆ ನೇಮಕಗೊಂಡಿರುವ ನೋಡಲ್ ಕೇಂದ್ರದ ಪ್ರಾಚಾರ್ಯರು ತಮ್ಮ ಕೇಂದ್ರಕ್ಕೆ ಸರಬರಾಜು ಆಗಿರುವ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ಗೌಪ್ಯವಾಗಿ ಕಾಯ್ದಿರಿಸುವಂತೆ ಸೂಚಿಸಿದ್ದಾರೆ.





