ಶಿಕ್ಷಣ

ಪ್ರಶ್ನೆ ಪತ್ರಿಕೆ ಸೋರಿಕೆ : ತುಮಕೂರಿನಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ಮಾರ್ಚ್ 6ಕ್ಕೆ ಮುಂದೂಡಿಕೆ

ತುಮಕೂರು: ಜಿಲ್ಲೆಯಲ್ಲಿ ಫೆ. 21ರಂದು ಮಂಗಳವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆ ಮಾರ್ಚ್ 6ರಂದು ನಡೆಯಲಿದೆ.

ಪ್ರಥಮ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಕೆಲವೆಡೆ ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಸೋರಿಕೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಪರೀಕ್ಷೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ಣ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ತಿಳಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಸೈಬರ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಲಾಗಿದೆ ಎಂದು ಹೇಳಿದರು.

ಪರೀಕ್ಷೆಗೆ ನೇಮಕಗೊಂಡಿರುವ ನೋಡಲ್ ಕೇಂದ್ರದ ಪ್ರಾಚಾರ್ಯರು ತಮ್ಮ ಕೇಂದ್ರಕ್ಕೆ ಸರಬರಾಜು ಆಗಿರುವ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ಗೌಪ್ಯವಾಗಿ ಕಾಯ್ದಿರಿಸುವಂತೆ ಸೂಚಿಸಿದ್ದಾರೆ.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

11 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

35 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

39 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago