ಶಿಕ್ಷಣ

ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ

ಮುಂಬೈ : ಬ್ಯಾಂಕ್ ಆಫ್ ಬರೋಡಾ ದೇಶಾದ್ಯಂತ ತನ್ನ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 2,700 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 11 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 20 ರಿಂದ 28 ವರ್ಷಗಳ ನಡುವೆ ಇರಬೇಕು. SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಈ ಅರ್ಹತೆಗಳನ್ನು ಹೊಂದಿರುವ ಯಾರಾದರೂ ಡಿಸೆಂಬರ್ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:-Bihar exit poll : ಸಮೀಕ್ಷೆ ಬಿಡುಗಡೆ ; ಯಾರಿಗೆಷ್ಟು ಸೀಟು?

ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ತಲಾ 800 ಮತ್ತು PWBD ಅಭ್ಯರ್ಥಿಗಳು ತಲಾ 400 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC ಮತ್ತು ST ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 15,000 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago