ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…