Mysore
24
clear sky

Social Media

ಶನಿವಾರ, 24 ಜನವರಿ 2026
Light
Dark

ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಬುಧವಾರ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪ್ರವೇಶ ಪುತ್ರ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಕೇಂದ್ರದಲ್ಲಿ ಮಾತ್ರ ಅಭ್ಯರ್ಥಿಗಳು ಹಾಜರಾಗಬೇಕು ಹಾಗೂ ಇತ್ತೀಚೆಗಿನ ಎರಡು ಭಾವಚಿತ್ರಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಲಾಗಿದೆ.

ಆ ದಿನ ಬೆಳಗ್ಗೆ 10ರಿಂದ 11 ಹಾಗೂ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದ್ದು, ಇದರ ನಡುವೆ ಅಭ್ಯರ್ಥಿಗಳು ಹೊರ ಹೋಗಲು ಅವಕಾಶವಿಲ್ಲ ಎನ್ನಲಾಗಿದೆ. ಇನ್ನು ಅಭ್ಯರ್ಥಿಗಳು ಓಎಂಆರ್‌ ಶೀಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್‌ ಅಥವಾ ಕೇಂದ್ರದ ಕೋಡ್‌ ಅನ್ನು ತಪ್ಪಾಗಿ ಬರೆದರೆ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

ವಸ್ತ್ರ ಸಂಹಿತೆ ಕಡ್ಡಾಯ: ಕೆ – ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಪಾಲಿಸಬೇಕಿದೆ. ಯಾವುದೇ ಅಕ್ರಮ ನಡೆಯಬಾರದು ಎಂಬ ಕಾರಣದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದರಂತೆ ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚು ಜೇಬುಗಳಿಲ್ಲದ ಸರಳ ಪ್ಯಾಂಟ್‌ ಧರಿಸುವುದು ಕಡ್ಡಾಯವಾಗಿದೆ. ಇದರ ಜತೆಗೆ ಜಿಪ್‌ ಪಾಕೆಟ್ಸ್‌, ದೊಡ್ಡ ಬಟನ್‌ ಮತ್ತು ವಿಸ್ತಾರವಾದ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಹಾಗೂ ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ತಿಳಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!