ಶಿಕ್ಷಣ

ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಬುಧವಾರ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪ್ರವೇಶ ಪುತ್ರ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಕೇಂದ್ರದಲ್ಲಿ ಮಾತ್ರ ಅಭ್ಯರ್ಥಿಗಳು ಹಾಜರಾಗಬೇಕು ಹಾಗೂ ಇತ್ತೀಚೆಗಿನ ಎರಡು ಭಾವಚಿತ್ರಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಲಾಗಿದೆ.

ಆ ದಿನ ಬೆಳಗ್ಗೆ 10ರಿಂದ 11 ಹಾಗೂ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದ್ದು, ಇದರ ನಡುವೆ ಅಭ್ಯರ್ಥಿಗಳು ಹೊರ ಹೋಗಲು ಅವಕಾಶವಿಲ್ಲ ಎನ್ನಲಾಗಿದೆ. ಇನ್ನು ಅಭ್ಯರ್ಥಿಗಳು ಓಎಂಆರ್‌ ಶೀಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್‌ ಅಥವಾ ಕೇಂದ್ರದ ಕೋಡ್‌ ಅನ್ನು ತಪ್ಪಾಗಿ ಬರೆದರೆ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

ವಸ್ತ್ರ ಸಂಹಿತೆ ಕಡ್ಡಾಯ: ಕೆ – ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಪಾಲಿಸಬೇಕಿದೆ. ಯಾವುದೇ ಅಕ್ರಮ ನಡೆಯಬಾರದು ಎಂಬ ಕಾರಣದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದರಂತೆ ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚು ಜೇಬುಗಳಿಲ್ಲದ ಸರಳ ಪ್ಯಾಂಟ್‌ ಧರಿಸುವುದು ಕಡ್ಡಾಯವಾಗಿದೆ. ಇದರ ಜತೆಗೆ ಜಿಪ್‌ ಪಾಕೆಟ್ಸ್‌, ದೊಡ್ಡ ಬಟನ್‌ ಮತ್ತು ವಿಸ್ತಾರವಾದ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಹಾಗೂ ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ತಿಳಿಸಲಾಗಿದೆ.

andolana

Share
Published by
andolana
Tags: examkset

Recent Posts

ಮೈಸೂರು ಮುಡಾ ಕಚೇರಿಗೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…

9 hours ago

ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನೇ ಓದಿಲ್ಲ ಎಂದ ರಾಹುಲ್‌ ಗಾಂಧಿ

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…

9 hours ago

ಆದಿವಾಸಿಗಳ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…

9 hours ago

ರಾಜ್ಯದಲ್ಲಿ ನವೆಂಬರ್.‌14ರಿಂದ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…

9 hours ago

ಶಬರಿಮಲೆಗೆ ತೆರಳುವವರಿಗೆ ಸಿಹಿಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…

10 hours ago

ಕಾಂಗ್ರೆಸ್‌ ವಿರುದ್ಧ ಮತ್ತೆ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್‌ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…

10 hours ago