ಬೆಂಗಳೂರು : ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯದ ಬೊಕ್ಕಸದಿಂದಲೇ ವಿದ್ಯಾರ್ಥಿ ವೇತನ ನೀಡಲು ಮುಂದಿನ ವರ್ಷದಿಂದ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯರಾದ ನಸೀರ್ ಅಹಮ್ಮದ್, ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಿಎಂ, ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆ ಅನುಸಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ 7,61,418 ವಿದ್ಯಾರ್ಥಿಗಳು ಶಿಷ್ಯವೇತನದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರ್ಕಾರ ಆದೇಶ ಹೊರಡಿಸುವ ಮುನ್ನವೇ ರಾಜ್ಯ ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಜತೆಗೆ ತನ್ನ ಪಾಲಿನ 67 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರಲ್ಲಿ ಈವರೆಗೂ1,34,510 ವಿದ್ಯಾರ್ಥಿಗಳಿಗೆ 63 ಕೋಟಿ ರೂ.ಗಳ ಶಿಷ್ಯ ವೇತನವನ್ನು ನೇರ ನಗದು ವರ್ಗಾವಣೆ ಮಾಡಲಾಗಿದೆ.
ಒಟ್ಟು 12.24 ಲಕ್ಷ ಅರ್ಜಿಗಳು ಸ್ವೀಕಾರವಾಗಿದ್ದವು, ಮುಂದಿನ ವರ್ಷ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವತಿಯಿಂದಲೇ ವಿದ್ಯಾರ್ಥಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.