ಶಿಕ್ಷಣ

ಶಾಲಾ ಕಾಲೇಜುಗಳಲ್ಲಿ ಇನ್ಮುಂದೆ ಪ್ರತಿ ದಿನ 10 ನಿಮಿಷ ಧ್ಯಾನ

ಬೆಂಗಳೂರು : ರಾಜ್ಯದಲ್ಲಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆರೋಗ್ಯ ವೃದ್ಧಿ, ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ ರೂಪಿಸಿಕೊಳ್ಳುವುದರ ಜೊತೆಗೆ ಉತ್ತಮ ಪ್ರಜೆಯಾಗಿ ರೂಪಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ರಾಜ್ಯದಲ್ಲಿನ ಎಲ್ಲ ಪ್ರಾಥಮಿಕ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡಲು ಅವಕಾಶವನ್ನು ಕಲ್ಪಿಸಿ ಕೊಡುವಂತೆ  ಅಕ್ಟೋಬರ್‌ 10 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು,  ರಾಜ್ಯಾಧ್ಯಕ್ಷ  ಶಂಭುಲಿಂಗನಗೌಡ, ಪ್ರಧಾನ ಕಾರ್ಯದರ್ಶಿ  ಚಂದ್ರಶೇಖರ್‌ ನುಗ್ಗಲಿರವರ ಸಹಿಯೊಂದಿಗೆ, “ ಶಾಲೆಗಳಲ್ಲಿ ಧ್ಯಾನ” ಆರಂಭಿಸುವಂತೆ ಪತ್ರ ಬರೆದಿತ್ತು.ಈ ಸಂಬಂಧ ಅಕ್ಟೋಬರ್‌ 20 ರಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಈ ಆದೇಶವನ್ನು ಹೊರಡಿಸಿದ್ದಾರೆ.  ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನು ಮುಂದೆ ಪ್ರತಿದಿನ 10 ನಿಮಿಷ ಧ್ಯಾನ ಮಾಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉದ್ದೇಶಿಸಿದೆ.

ಶಾಲೆಗಳಲ್ಲಿ ಪ್ರತಿನಿತ್ಯ ಧಾನ್ಯ ಮಾಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗಲಿದೆ ಎಂದು ಇಲಾಖೆಯು ಈ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಾಡಿಕೊಂಡ ಮನವಿಯ ಮೇರೆಗೆ ಇಲಾಖೆಯ ಸಚಿವ ಬಿ.ಸಿ. ನಾಗೇಶ್‌ ಈ ಸಂಬಂಧ ಆದೇಶ ಹೊರಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಾಲೆ – ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಧ್ಯಾನ ಮಾಡುವುದು ಸೂಕ್ತವಾದ ಕ್ರಮವಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿಕೊಂಡು, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಶಾಲೆಗಳಿಗೆ ಸೂಚಿಸುವಂತೆ ಸೊತ್ತೋಲೆಯಲ್ಲಿ ತಿಳಿಸಲಾಗಿದೆ.

andolanait

Share
Published by
andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

26 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago