ಬೆಂಗಳೂರು : ರಾಜ್ಯದಲ್ಲಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆರೋಗ್ಯ ವೃದ್ಧಿ, ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ ರೂಪಿಸಿಕೊಳ್ಳುವುದರ ಜೊತೆಗೆ ಉತ್ತಮ ಪ್ರಜೆಯಾಗಿ ರೂಪಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ರಾಜ್ಯದಲ್ಲಿನ ಎಲ್ಲ ಪ್ರಾಥಮಿಕ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡಲು ಅವಕಾಶವನ್ನು ಕಲ್ಪಿಸಿ ಕೊಡುವಂತೆ ಅಕ್ಟೋಬರ್ 10 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು, ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿರವರ ಸಹಿಯೊಂದಿಗೆ, “ ಶಾಲೆಗಳಲ್ಲಿ ಧ್ಯಾನ” ಆರಂಭಿಸುವಂತೆ ಪತ್ರ ಬರೆದಿತ್ತು.ಈ ಸಂಬಂಧ ಅಕ್ಟೋಬರ್ 20 ರಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಆದೇಶವನ್ನು ಹೊರಡಿಸಿದ್ದಾರೆ. ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನು ಮುಂದೆ ಪ್ರತಿದಿನ 10 ನಿಮಿಷ ಧ್ಯಾನ ಮಾಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉದ್ದೇಶಿಸಿದೆ.
ಶಾಲೆಗಳಲ್ಲಿ ಪ್ರತಿನಿತ್ಯ ಧಾನ್ಯ ಮಾಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗಲಿದೆ ಎಂದು ಇಲಾಖೆಯು ಈ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಾಡಿಕೊಂಡ ಮನವಿಯ ಮೇರೆಗೆ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಈ ಸಂಬಂಧ ಆದೇಶ ಹೊರಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಾಲೆ – ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಧ್ಯಾನ ಮಾಡುವುದು ಸೂಕ್ತವಾದ ಕ್ರಮವಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿಕೊಂಡು, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಶಾಲೆಗಳಿಗೆ ಸೂಚಿಸುವಂತೆ ಸೊತ್ತೋಲೆಯಲ್ಲಿ ತಿಳಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…