ಶಿಕ್ಷಣ

ಶಾಲಾ ಮಕ್ಕಳಿಗೆ ‘ಪ್ರವಾಸ ಭಾಗ್ಯ’ ಮತ್ತೆ ಪ್ರಾರಂಭ

ಬೆಂಗಳೂರು– ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ರದ್ದುಗೊಂಡಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಪ್ರಾರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮುಂದಿನ ತಿಂಗಳ ಅಂತ್ಯದೊಳಗೆ ಶಾಲಾ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ಯುವ ಶಾಲಾ ಪ್ರವಾಸ ಭಾಗ್ಯವನ್ನು ಪ್ರಾರಂಭಿಸಬೇಕು, ಜನವರಿ 1ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕೆಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
2022ರ ಡಿಸೆಂಬರ್ ಅಂತ್ಯದೊಳಗೆ ಮಕ್ಕಳನ್ನು ವಾರ್ಷಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು. ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಕುರಿತು ಅವರ ಪೋ
ಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್.ಆರ್ ಸೂಚಿಸಿದ್ದಾರೆ.
ಮಕ್ಕಳನ್ನು ಕರೆದೊಯ್ಯಲು ಶಾಲೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ವಾಹನಗಳನ್ನು ಬಾಡಿಗೆಗೆ ಪಡೆಯುವುದು ಕಡ್ಡಾಯವಾಗಿದೆ.
ಶಾಲಾ ಪ್ರವಾಸಗಳಿಗೆ ಖಾಸಗಿ ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಶಾಲೆಗಳಿಗೆ ಅನುಮತಿ ಇರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರವಾಸದಲ್ಲಿ ಬಾಲಕಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರನ್ನು ನಿಯೋಜಿಸಬೇಕೆಂದು ಶಾಲೆಗಳಿಗೆ ಸೂಚಿಸಿದೆ.
ಜೊತೆಗೆ ಪ್ರವಾಸದ ಸಂದರ್ಭದಲ್ಲಿ ಅಪಘಾತಗಳು ಅಥವಾ ಅಹಿತಕರ ಏನಾದರೂ ನಡೆದಲ್ಲಿ ಇಲಾಖೆ ಇಲ್ಲವೇ ಶಾಲಾ ಆಡಳಿತ ಮಂಡಳಿ ಜವಾಬ್ದಾರಿ ಆಗಿರುವುದಿಲ್ಲ ಎಂದು ಹೇಳಲಾಗಿದೆ.
ಮಕ್ಕಳಲ್ಲಿ ಕನಸುಗಳನ್ನು ಬಿತ್ತುವ ಮೂಲಕ ವಿದ್ಯಾವಂತ ಸಮಾಜ ನಿರ್ಮಾಣ ಭರವಸೆಯೊಂದಿಗೆ ಈ ಯೋಜನೆಗೆ ಕೇಂದ್ರ ಸರಕಾರ ಅನುನೋದನೆ ನೀಡಿದೆ.

ಎಲ್ಲೆಲ್ಲಿಗೆ ಪ್ರವಾಸ?
ಆಯಾ ಜಿಲ್ಲೆಗಳಲ್ಲಿನ ಪ್ರತಿಷ್ಠಿತ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳಿಗೆ ಅಥವಾ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ಯುವ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲದಿದ್ದಲ್ಲಿ ನೆರೆಹೊರೆ ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವಾಸ ಕರೆದೊಯ್ಯಬಹುದು. ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಪ್ರಾಯೋಗಿಕ ತರಬೇತಿ ನೀಡುವ ಪ್ರಯೋಗಾಲಯ, ಕಾರ್ಯಾಲಯಗಳನ್ನು ಭೇಟಿ ಮಾಡಿಸಬೇಕು. ಮಕ್ಕಳು ತಮ್ಮ ಶೈಕ್ಷಣಿಕ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ ಮಾಹಿತಿ ಒದಗಿಸಬೇಕು.
ಪ್ರವಾಸದ ಸಮಯ:
ಇದೇ ನವೆಂಬರ್ ಮತ್ತು ಡಿಸೆಂಬರ್‍ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕೊಂಡೊಯ್ಯಬೇಕಿದೆ. ಜತೆಗೆ ಪ್ರವಾಸದಿಂದ ಆದ ಲಾಭ ಮತ್ತು ಉತ್ತಮ ಅಂಶಗಳನ್ನು ವಿದ್ಯಾರ್ಥಿಗಳಿಂದ ಪಡೆದು ವರದಿ ಸಿದ್ಧಪಡಿಸಿ ಆರ್‍ಎಂಎಸ್‍ಎ ಕೇಂದ್ರ ಕಚೇರಿಗೆ ವರದಿ ಕಳುಹಿಸಬೇಕಿದೆ.
ಮಕ್ಕಳಲ್ಲಿ ಸಹಕಾರ, ಹೊಂದಾಣಿಕೆ, ನಾಯಕತ್ವ ಮನೋಭಾವ, ವೈಜÁ್ಞನಿಕ ಮನೋಭಾವ ಬೆಳೆಸಿಕೊಳ್ಳಲು ಪ್ರೇರಕವಾಗುವಂತೆ ಪ್ರವಾಸ ಏರ್ಪಡಿಸಬೇಕು. ತರಗತಿ ಕಲಿಕೆಗೆ ಪೂರಕವಾಗುವಂತೆ ಹಾಗೂ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮತ್ತು ನೈಜ ಜೀವನದಲ್ಲಿ ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ವಾತಾವರಣ ರೂಪಿಸಿ ಅಂತಹ ಬೋಧನೆಯನ್ನು ಪ್ರವಾಸದಲ್ಲಿ ನೀಡಬೇಕು.

andolanait

Recent Posts

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

9 mins ago

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

30 mins ago

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ : ಯದುವೀರ್ ಆರೋಪ

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

41 mins ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

2 hours ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

2 hours ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

3 hours ago