ಬೆಂಗಳೂರು : ನಾಳೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ನಲ್ಲಿ ಸುದ್ದಿಗೋಷ್ಠಿ ನಡೆಸಲಿರೋ ಸಚಿವ ನಾಗೇಶ್ ಅವರು, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನೋಂದಣಿಗೊಂಡ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶದ ಸಂದೇಶ ರವಾನೆಯಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳು- 6,00,519, ಪುನರಾವರ್ತಿತ ಅಭ್ಯರ್ಥಿಗಳು- 61,808, ಖಾಸಗಿ ಅಭ್ಯರ್ಥಿಗಳು- 21,928, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಕಲಾ ವಿಭಾಗದಲ್ಲಿ 2,28,167 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,45,519 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಏಪ್ರಿಲ್ 23 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (@BCNagesh_bjp) June 17, 2022