ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸ್ವರೂಪವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಕೊರೋನಾ ವೇಳೆ ಇದ್ದ ಸರಳತೆಯ ಪ್ರಮಾಣ ಕೈಬಿಟ್ಟು, ಕಠಿಣ ಪ್ರಮಾಣದ ಪ್ರಶ್ನೆಗಳನ್ನು ಹೆಚ್ಚಿಸಿದೆ.
ಈ ಸಂಬಂಧ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಿಸಿದ ಮಾಹಿತಿ ಬಿಡುಗಡೆ ಮಾಡಿದೆ. ಅದರಂತೆ ಈ ಬಾರಿ ಸುಲಭ ಪ್ರಶ್ನೆ ಶೇ.30, ಸಾಧಾರಣ ಪ್ರಶ್ನೆ ಶೇ.50, ಕಠಿಣ ಪ್ರಶ್ನೆ ಶೇ.20 ಸೇರಿದಂತೆ ಒಟ್ಟು 100 ಅಂಕಗಳಿಗೆ ಸರಿಸಮವಾಗಿ ಪ್ರಶ್ನೆ ಪತ್ರಿಕೆ ರೂಪಿಸಿದೆ.
ಕಳೆದ ಎರಡು ವರ್ಷ ಕೊರೋನಾ ಕಾರಣಕ್ಕೆ ಸರಳವಾದ ಪ್ರಶ್ನೆ ಪತ್ರಿಕೆ ಜತೆಗೆ ಬಹುಆಯ್ಕೆ ಮಾದರಿಯ ಪ್ರಶ್ನೆಗಳನ್ನು ನೀಡಿತ್ತು. ಆದರೆ ಮುಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ರೀತಿ ಪ್ರಶ್ನೆ ಪತ್ರಿಕೆ ಸುಲಭವಾಗಿರುವುದಿಲ್ಲ. ಅಲ್ಲದೇ ಕಳೆದ 2 ವರ್ಷ ಶೇ.75 ಹಾಜರಾತಿಗೆ ನೀಡಿದ್ದ ವಿನಾಯತಿಯನ್ನು ಮುಂದಿನ ಪರೀಕ್ಷೆಗೆ ರದ್ದು ಮಾಡಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಹಾಸನ : ಕಲುಷಿತ ಆಹಾರ ಸೇವಿಸಿ 25 ಮಕ್ಕಳು ಅಸ್ವಸ್ಥ