ಶಿಕ್ಷಣ

SSLC Preparatory ಪರೀಕ್ಷೆ ಫೆ. 23ರಿಂದ ಆರಂಭ

ಬೆಂಗಳೂರು: ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು), 27ರಂದು ಗಣಿತ, 28ರಂದು ವಿಜ್ಞಾನ, ಮಾರ್ಚ್‌ 1ರಂದು ಸಮಾಜ ವಿಜ್ಞಾನ (ತಲಾ 80 ಅಂಕಗಳು) ಪರೀಕ್ಷೆಗಳು ನಡೆಯಲಿವೆ.

ಎಲ್ಲ ಪರೀಕ್ಷೆಗಳನ್ನೂ ಪ್ರತಿದಿನ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಸಬೇಕು. ಜೆಟಿಎಸ್‌ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡ,ಪರೀಕ್ಷೆ ಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

Exams
Examination
Education
SSLC
Preparatory Examination

andolanait

Share
Published by
andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

38 mins ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

1 hour ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

2 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

2 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

2 hours ago