Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ: 2,164 ವಿದ್ಯಾರ್ಥಿಗಳು ಫೇಲ್‌

ಬೆಂಗಳೂರು: ಕಳೆದ ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫ‌ಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದವು.

ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,164 ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ನಿರಾಸೆ ಅನುಭವಿಸಿದ್ದಾರೆ. ಅರ್ಜಿ ಸಲ್ಲಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಮೊಬೈಲ್‌ ಸಂದೇಶದ ಮೂಲಕ ಫಲಿತಾಂಶವನ್ನು ರವಾನೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!