ಬೆಂಗಳೂರು: 2023-24ರ ರಾಜ್ಯ ಬಜೆಟ್ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ.
ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಜೊತೆಗೆ ಶಾಲಾ-ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್‍ಗಳ ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾರಾಯಣ ಗುರು ವಸತಿ ಶಾಲೆ ಪ್ರತಿ ಶಾಲೆಗೆ 18 ಕೋಟಿ ವೆಚ್ಚ ವ್ಯಯಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.