Mysore
27
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

TET- 2022 ರ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್ ಚಿತ್ರವಿದ್ದ ಎಡವಟ್ಟಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್​ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್​ ಐಡಿ ಮತ್ತು ಪಾಸ್​ವರ್ಡ್​ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್​ ಐಡಿ ಮತ್ತು ಪಾಸ್​ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್​ಮಿಟ್​ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!