ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್ ಐಡಿ ಮತ್ತು ಪಾಸ್ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್ಮಿಟ್ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…