ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಪಟ್ಟಂತೆ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡುತ್ತಿದೆ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಸದಸ್ಯರಾದ ಸಲೀಂ ಅಹಮ್ಮದ್ ಪರವಾಗಿ ವಿಪಕ್ಷ ನಾಉಕ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಮಹಿಳೆಉರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿವರ ನೀಡಿದರು. ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಲು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಶಾಲೆಗಳಲ್ಲಿ ಕರಾಟೆ, ಜೂಡೋ, ತಾಕ್ವಾಂಡೊ ಆತ್ಮರಕ್ಷಣಾ ತರಬೇತಿಉನ್ನು ನೀಡಲಾಗುತ್ತಿದೆ. ಈವರೆಗೂ 1,754 ಮೆಟ್ರಿಕ್ ಪೂರ್ವ, 25 ಸಾವಿರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರು ತರಬೇತಿ ಪಡೆದಿದ್ದಾರೆ ಎಂದರು.
ಆದರೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಈ ರೀತಿಯ ತರಬೇತಿಗಳಿಂದ ದೌರ್ಜನ್ಯ ನಿಲ್ಲುವುದಿಲ್ಲ. ಪೊಲೀಸ್ ಠಾಣೆಗಳನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕು ಎಂದರು.
ಸದಸ್ಯೆ ಭಾರತಿ ಶೆಟ್ಟಿ ಅವರು ಸ್ವಾತಂತ್ರ್ಯದ ನಂತರದಿಂದಲೂ ಈ ರೀತಿಯ ಪ್ರಕರಣದಿಂದ ತಲೆತಗ್ಗಿಸುವ ವಾತಾವರಣವಿದೆ. ಸರ್ಕಾರ ಶಾಲಾ ಶಿಕ್ಷಣದಲ್ಲಿ ನೈತಿಕ ಪಠ್ಯವನ್ನು ಅಳವಡಿಸಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ದೌರ್ಜನ್ಯ ಪ್ರಕರಣಗಳು ತೀವ್ರಗೊಂಡಿವೆ ಎಂದು ಆಕ್ಷೇಪಿಸಿದರು.
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…