ಬೆಂಗಳೂರು: ಮಾರ್ಚ್ ತಿಂಗಳಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಕ್ರಮ, ಪರೀಕ್ಷೆಯಲ್ಲಿ ಆದ ಬದಲಾವಣೆ, ಭದ್ರತೆ ಹಾಗೂ ನಕಲು ಮುಕ್ತ ಪರೀಕ್ಷೆಯ ಕ್ರಮಗಳ ಕುರಿತು ಚರ್ಚಿಸಲಾಯಿತು. ಪರೀಕ್ಷೆಯಲ್ಲಿ ನಕಲು ತಡೆದು ಸುರಕ್ಷಿತವಾಗಿ ಪರೀಕ್ಷೆ ನಡೆಸುವ ಕುರಿತು ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಬಿ.ಸಿ ನಾಗೇಶ್ ಮಾತುಕತೆ ನಡೆಸಿದರು.
ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ SSCL ಪರೀಕ್ಷೆಗಳು ನಡೆಯಲಿದೆ. ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳನ್ನು ನೀಡಿದರು. ” ಈ ಬಾರಿ ದ್ವಿತೀಯ ಪಿಯುಸಿ ಪರೀಸಖೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.
“ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಗೆ ಅವಕಾಶ ಇರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ 15 ನಿಮಿಷ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ವಿವರಿಸಿದರು. ಇನ್ನು ಇದೇ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ನಾಗೇಶ್, ಪಿಯುಸಿ ಪರೀಕ್ಷೆ ನಂತರ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದೆ. ಶಿಕ್ಷಣ ಇಲಾಖೆ ಸಿಸಿ ಟಿವಿ ಅಳವಡಿಕೆ ಸೇರಿ ಬಹುತೇಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…