Mysore
16
clear sky

Social Media

ಮಂಗಳವಾರ, 21 ಜನವರಿ 2025
Light
Dark

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಬೇಸರದ ಸುದ್ದಿ; ಶೈಕ್ಷಣಿಕ ಶುಲ್ಕ ಶೇ.10ರಷ್ಟು ಹೆಚ್ಚಳ

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ.

ಈ ಹಿಂದೆ ವಿಶ್ವವಿದ್ಯಾಲಯಗಳು ಕೊವಿಡ್‌ಗೂ ಮುನ್ನ ಶುಲ್ಕ ಹೆಚ್ಚಳ ಮಾಡುವಂತೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ತಡೆ ಹಿಡಿದಿತ್ತು. ಆದರೆ ಸದ್ಯ ವಿಶ್ವವಿದ್ಯಾಲಯಗಳು ಆರ್ಥಿಕ ಸಮಸ್ಯೆ ಅನುಭವಿಸುತ್ತಿರುವ ಕಾರಣವನ್ನು ನೀಡಿದ್ದು ಶುಲ್ಕ ಹೆಚ್ಚಿಸಲು ಅನುಮತಿ ಕೋರಿ ಮರು ಪ್ರಸ್ತಾವನೆ ಸಲ್ಲಿಸಿವೆ.

ಇನ್ನು 2024-25ನೇ ಸಾಲಿನಿಂದ ಈ ಶುಲ್ಕಗಳನ್ನು ವಿಧಿಸಲಾಗಲಿದ್ದು, ಪದವಿ ವಿದ್ಯಾರ್ಥಿಗಳು ಈ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಇದ್ದ ಶುಲ್ಕಕ್ಕಿಂತ ಶೇ. 10ರಷ್ಟು ಹೆಚ್ಚಿನ ಹಣವನ್ನು ಪಾವತಿಸಬೇಕಿದೆ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ