ಮನರಂಜನೆ

10 ದಿನಗಳಲ್ಲಿ 20 ಕೋಟಿ ರೂ. ಗಳಿಕೆ ಮಾಡಿದ ಮಾರ್ಟಿನ್

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ.

ಮಾರ್ಟಿನ್‍ ಚಿತ್ರ ಬಿಡಗುಡೆಯಾದ ಸಂದರ್ಭದಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹಬ್ಬದ ಸೀಸನ್‍ ಆಗಿದ್ದರೂ, ನಿರೀಕ್ಷಿತ ಕಲೆಕ್ಷನ್‍ ಕಾಣಲಿಲ್ಲ. ಬಾಕ್ಸ್ ಆಫೀಸ್‍ ಗಳಿಕೆ ಟ್ರಾಕ್‍ ಮಾಡುವ ಸಕ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಮಾರ್ಟಿನ್‍ ಚಿತ್ರವು ಮೊದಲ ಮೂರು ದಿನಗಳಲ್ಲಿ ಗಳಿಕೆ ಮಾಡಿರುವ ಮೊತ್ತ ಕೇವಲ 15.50 ಕೋಟಿ ರೂ. ಮಾತ್ರ. ಈ ಪೈಕಿ ಮೊದಲ ದಿನ ಚಿತ್ರವು 6.7 ಕೋಟಿ ರೂ. ಗಳಿಕೆ ಮಾಡಿದರೆ, ಎರಡನೇ ದಿನ 5.5 ಕೋಟಿ ರೂ. ಸಂಗ್ರಹ ಮಾಡಿದೆ. ಮೂರನೆಯ ದಿನ 3.35 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ ಮೂರು ದಿನಗಳಲ್ಲಿ ಚಿತ್ರವು ಇಡೀ ದೇಶಾದ್ಯಂತ ಗಳಿಕೆ ಮಾಡಿರುವ ಮೊತ್ತ ಕೇವಲ 15.5 ಕೋಟಿ ರೂ. ಮಾತ್ರ.

100 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದ್ದ ಮತ್ತು ಕನ್ನಡದ ಅತ್ಯಂತ ದೊಡ್ಡ ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ಗ ‘ಮಾರ್ಟಿನ್‍ ಒಟ್ಟಾರೆ ಎಷ್ಟು ಗಳಿಕೆ ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದೇ ಸಕ್ನಿಕ್ ಪ್ರಕಾರ, 10 ದಿನಗಳ ಅಂತ್ಯಕ್ಕೆ ಚಿತ್ರವು 20 ಕೋಟಿ 60 ಲಕ್ಷ ರೂ. ಗಳಿಕೆ ಮಾಡಿದೆಯಂತೆ. ಇನ್ನು. ಮೊದಲ ವಾರದ ಅಂತ್ಯಕ್ಕೆ ಚಿತ್ರವು 19.4 ಕೋಟಿ ರೂ. ಸಂಗ್ರಹಿಸಿತ್ತು ಎಂಬ ಮಾಹಿತಿ ಇದೆ.

ಕೆಲವು ದಿನಗಳ ಹಿಂದೆ ಚಿತ್ರದ ಸಂತೋಷ ಕೂಟ ನಡೆದ ಸಂದರ್ಭದಲ್ಲಿ ಚಿತ್ರದ ಕಲೆಕ್ಷನ್‍ ಕುರಿತು ಮಾತನಾಡಿದ್ದ ಧ್ರುವ ಸರ್ಜಾ, ‘ಚಿತ್ರದ ಕಲೆಕ್ಷನ್‍ ಈಗಲೇ ಗೊತ್ತಾಗುವುದಿಲ್ಲ. ಸದ್ಯ ಎರಡು ದಿನಗಳ ಕೆಲಕ್ಷನ್‍ ಅಷ್ಟೇ ಗೊತ್ತಾಗಿದೆ ಎಂದು ಹೇಳಿದ್ದರು.

ಮಾರ್ಟಿನ್‍ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಅರ್ಜುನ್‍ ಸರ್ಜಾ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ.ಅರ್ಜುನ್‍ ನಿರ್ದೇಶನ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

5 mins ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

1 hour ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

1 hour ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

1 hour ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

2 hours ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

2 hours ago