ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್ ರೋಣ’ ಚಿತ್ರದ ನಂತರ ಸುದೀಪ್ ಯಾವೊಂದು ಚಿತ್ರದಲ್ಲೂ ಪೂರ್ಣಪ್ರಮಾಣ ನಾಯಕನಾಗಿ ಕಾಣಿಸಿಕೊಂಡಿರಲಿಲ್ಲ. ‘ಮ್ಯಾಕ್ಸ್’ ಚಿತ್ರದ ಮೂಲಕ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವರ್ಷ ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ‘UI’ ಆಗಿತ್ತು. ಚಿತ್ರವು ಮೊದಲ ದಿನ 6.95 ಕೋಟಿ ರೂ.ನಷ್ಟು ಗಳಿಕೆ ಮಾಡಿತ್ತು. ಈಗ ’ಮ್ಯಾಕ್ಸ್’ ಮೊದಲ ದಿನ 8.7 ಕೋಟಿ ರೂ.ನಷ್ಟು ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್ ಟ್ರಾಕರ್ ಸಚ್ನಿಕ್ ಡಾಟ್‍ಕಾಮ್ ಹೇಳಿದೆ. ಎರಡನೆಯ ದಿನ ನಾಲ್ಕು ಕೋಟಿ ರೂ. ಗಳಿಕೆಯಾಗಿದ್ದು, ಎರಡು ದಿನಗಳಿಂದ 12.70 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.
‘ಮ್ಯಾಕ್ಸ್’ ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿವೆ ಎಂಬ ಸುದ್ದಿ ಮೊದಲು ಕೇಳಿಬಂದಿತ್ತು. ಆದರೆ, ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಕನ್ನಡ ಅವತರಣಿಕೆಯು ಡಿ. 25ರಂದು ಬಿಡುಗಡೆಯಾಗಿದ್ದರೆ, ತೆಲುಗು ಮತ್ತು ತಮಿಳು ಅವತರಣಿಕೆಗಳು ಇಂದು (ಡಿ. 27) ಆಂಧ್ರ ಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ.
‘ಮ್ಯಾಕ್ಸ್’ ಒಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಒಂದು ರಾತ್ರಿಯಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಚಿತ್ರದಲ್ಲಿ ಸುದೀಪ್, ಅರ್ಜುನ್ ಮಹಾಕ್ಷಯ್ ಎಂಬ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಅವರಿಗೆ ನಾಯಕಿ ಇಲ್ಲ.
‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿ ಕ್ರಿಯೇಷನ್ಸ್ ಬ್ಯಾನರ್‍ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್ ನಿರ್ಮಿಸಿರುವ ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…