ಮುಂಬೈ: ಇದೇ ತಿಂಗಳ 14ರಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.
ಸದ್ಯ ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಬಂಧಿತ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅನ್ಮೋಲ್ ಬಿಷ್ಣೋಯ್ ಜೊತೆ ಇಂಟರ್ನೆಟ್ ಕಾಲ್ ಮೂಲ ಸಂಪರ್ಕದಲ್ಲಿ ಇದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ.
ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಬಂಧಿತರು ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್ ಮೂಲಕ ಗುಜರಾತ್ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್ ಸ್ವಿಚ್ ಆಫ್ ಮಾಡಿಯೇ ಇಟ್ಟಿದ್ದರು. ಕಚ್ನ ಭುಜ್ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಸ್ವಿಚ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ.
ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್ನವರು ದ್ವೇಷ ಸಾಧಿಸುತ್ತಿದ್ದಾರೆ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿದೆ. ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ದಾಳಿ ನಂತರ ಸಲ್ಲು ಮನೆಯ ಬಳಿ ಭದ್ರತೆ ಹೆಚ್ಚಿಸಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…