ಮನರಂಜನೆ

ಸಲ್ಮಾನ್ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿಗೆ ಲಾರೆನ್ಸ್‌ ಗ್ಯಾಂಗ್‌ನಿಂದ 4 ಲಕ್ಷ ರೂ ಸುಪಾರಿ!

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ಸದ್ಯ ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಬಂಧಿತ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅನ್ಮೋಲ್ ಬಿಷ್ಣೋಯ್ ಜೊತೆ ಇಂಟರ್​ನೆಟ್ ಕಾಲ್ ಮೂಲ ಸಂಪರ್ಕದಲ್ಲಿ ಇದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ.

ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಬಂಧಿತರು ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್​ ಮೂಲಕ ಗುಜರಾತ್​ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್​ ಸ್ವಿಚ್​ ಆಫ್ ಮಾಡಿಯೇ ಇಟ್ಟಿದ್ದರು. ಕಚ್​ನ ಭುಜ್​ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಸ್ವಿಚ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ.

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್​ನವರು ದ್ವೇಷ ಸಾಧಿಸುತ್ತಿದ್ದಾರೆ‌ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿದೆ. ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ದಾಳಿ ನಂತರ ಸಲ್ಲು ಮನೆಯ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago