ಮನರಂಜನೆ

ಪಕ್ಕದ ರಾಜ್ಯಗಳಿಗೆ ಹೊರಡಲು ‘45’ ಚಿತ್ರತಂಡ ತಯಾರಿ; ಯಾಕೆ?

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಟೀಸರ್, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‍ಗೆ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ ಹೇಳುವುದರ ಜೊತೆಗೆ, ಚಿತ್ರದ ಪ್ರಚಾರ ಮಾಡಲು ಸಜ್ಜಾಗಿದೆ.

ಟೀಸರ್‌ಗೆ ದೊರಕಿರುವ ಮೆಚ್ಚುಗೆಗೆ ಖುಷಿಯಾಗಿರುವ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ, ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.

ಏಪ್ರಿಲ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಂಬೈನ PVR Juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಚಿತ್ರತಂಡ, ಅಂದು ಸಂಜೆ 7 ಗಂಟೆಗೆ ಹೈದರಾಬಾದ್‍ನ ಬಂಜಾರ ಹಿಲ್ಸ್ ನಲ್ಲಿರುವ PVR Cineplexನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಮರುದಿನ ಏಪ್ರಿಲ್ 16 ಬುಧವಾರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್ ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ PVR Forumನಲ್ಲಿ ‘45’ ಚಿತ್ರದ ಪತ್ರಿಕಾಗೋಷ್ಠಿ ನಡೆಯಲಿದೆ.

ಈ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳ ಮೂಲಕ ಫಿಲಾಸಫಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಚಿತ್ರದಲ್ಲಿ ಶೇ. 40ರಷ್ಟು ಗ್ರಾಫಿಕ್ಸ್ ಇರಲಿದೆ. ಟೊರೊಂಟೋದ ಖ್ಯಾತ VFX ಸಂಸ್ಥೆಯಾದ MARZನಲ್ಲಿ ಗ್ರಾಫಿಕ್ಸ್ ಕೆಲಸ ನಡೆಯುತ್ತಿದ್ದು, ಆಗಸ್ಟ್ 15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

18 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

19 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

19 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

19 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

22 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 day ago