ಮನರಂಜನೆ

ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ MARZ ಸಂಸ್ಥೆಯವರೇ ಹೇಳಿಕೊಂಡಿದ್ದರು. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಚಿತ್ರವನ್ನು ಡಿ. 25ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.

ಕೆಲವು ತಿಂಗಳ ಹಿಂದೆ ಚಿತ್ರತಂಡವು, ವಿಶೇಷ ಟೀಸರ್ ಮೂಲಕ ಚಿತ್ರವು ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಹಂಚಿಕೊಂಡಿತ್ತು. ಕನ್ನಡದ ಮೂರು ಜನ ಹೆಸರಾಂತ ನಾಯಕನಟರ ಅಭಿಮಾನಿಗಳು ಈ ಸುದ್ದಿ ಕೇಳಿ ಸಂತಸಗೊಂಡು, ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದರು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಕ್ಕೆ ಕಾರಣ ಗ್ರಾಫಿಕ್ಸ್ ಕೆಲಸಗಳು.

ಕೆನಡಾದ ಪ್ರತಿಷ್ಠಿತ MARZ ಸಂಸ್ಥೆ ಈ ಚಿತ್ರಕ್ಕೆ VFX ಕೆಲಸ ಮಾಡುತ್ತಿದ್ದು, ಈ ಸಂಸ್ಥೆ VFX ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ ತಂತ್ರಜ್ಞರಿಂದ ಗ್ರಾಫಿಕ್ಸ್ ಕೆಲಸ ನಡೆಯುತ್ತಿದೆ. ಚಿತ್ರದಲ್ಲಿ ಶೇ. 40ರಷ್ಟು ಗ್ರಾಫಿಕ್ಸ್ ಕೆಲಸವಿದ್ದು, ಅದಿನ್ನೂ ಪೂರ್ತಿಯಾಗಿ ಮುಗಿಯದ ಹಿನ್ನೆಲೆಯಲ್ಲಿ ಚಿತ್ರವು ಅಂದುಕೊಂಡಂತೆ ಬಿಡುಗಡೆಯಾಗಿಲ್ಲ.

ಈ ಕುರಿತು ಮಾತನಾಡಿರುವ MARZ ಸಂಸ್ಥೆಯ ಮುಖ್ಯಸ್ಥ ಹಾಗೂ ತಂತ್ರಜ್ಞ ಯಶ್ ಗೌಡ, ‘ಗ್ರಾಫಿಕ್ಸ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ ಮಾಡಲು ಆಗಲಿಲ್ಲ. ಸೆಪ್ಟೆಂಬರ್ 16ರ ಒಳಗೆ VFX ಕೆಲಸ ಮುಕ್ತಾಯವಾಗಲಿದೆ. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತವೆ. ಅಕ್ಟೋಬರ್ 16ರ ಒಳಗೆ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತದೆ. ಚಿತ್ರ ಬಿಡುಗಡೆ ಸ್ವಲ್ಪ ತಡವಾದರೂ ಅತ್ಯುತ್ತಮ ತಂತ್ರಜ್ಞಾನದಿಂದ ಕೂಡಿರುವ ಚಿತ್ರವಾಗಿ ‘45’ ನಿಮ್ಮ ಮುಂದೆ ಬರಲಿದೆ’ ಎಂದು ಹೇಳಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಚಿತ್ರ ಕೈಗೆ ಸಿಕ್ಕ ನಂತರ ಪ್ರಚಾರ ಮಾಡಿ, ಡಿ. 25ರಂದು ಬಿಡುಗಡೆ ಮಾಡುವುದಾಗಿ ನಿರ್ಮಾಪಕ ರಮೇಶ್‍ ರೆಡ್ಡಿ ಮತ್ತು ನಿರ್ದೇಶಕ ಅರ್ಜುನ್‍ ಜನ್ಯ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

55 mins ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

1 hour ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 hour ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

3 hours ago