ಮನರಂಜನೆ

ಪೌರಕಾರ್ಮಿಕ ಈಗ ನಾಯಕ: ಇವನೇ ಶ್ರೀನಿವಾಸನಾಗಿ ಬಂದ ಪ್ರತಾಪ್‍

ಕೆಲವು ವರ್ಷಗಳ ಹಿಂದೆ ರಕ್ಷಿತ್‍ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್‍ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್‍ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ.

‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಎಸ್‍. ಕುಮಾರ್‍. ಲಕ್ಷ್ಮಿ ನರಸಿಂಹಸ್ವಾಮಿ ಮೂವಿ ಮೇಕರ್ಸ್ ಹಾಗೂ ಎಲ್.ಎನ್.ಡಿ. ಕ್ರಿಯೇಶನ್ಸ್ ಮೂಲಕ ಪ್ರತಾಪ್ ಎನ್. ಹಾಗೂ ನವೀನ್ ಕುಮಾರ್ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇನ್ನು, ಬೃಹತ್‍ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪ್ರತಾಪ್, ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ. ಮೊದಲಿಂದಲೂ ಅಭಿನಯ ಎಂದರೆ ಆಸಕ್ತಿ ಹೊಂದಿದ್ದ ಪ್ರತಾಪ್‍, ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಹೀರೋ ಆಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟೀಸರನ್ನು ಶಿವರಾಜಕುಮಾರ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಸೋಷಿಯಲ್ ಮೀಡಿಯಾದಿಂದ ಏನೇನೆಲ್ಲ ತೊಂದರೆ ಆಗುತ್ತಿದೆ ಎಂಬುದರ ಸುತ್ತ ಚಿತ್ರ ಸಾಗುತ್ತದೆ ಎನ್ನುವ ಕುಮಾರ್‍, ‘ಬೆಂಗಳೂರು,‌ ಮೈಸೂರು, ಕೋಲಾರ, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಪ್ರತಾಪ್‍ಗೆ ನಾಯಕಿಯಾಗಿ ಆದ್ಯಪ್ರಿಯಾ ನಟಿಸಿದ್ದಾರೆ. ರೋಹಿತ್ ಕುಮಾರ್ ಈ ಕಥೆ ಬರೆದಿದ್ದು, ನಾನು ಡೈಲಾಗ್ ರಚಿಸಿ ನಿರ್ದೇಶನ ಮಾಡಿದ್ದೇನೆ. ಪ್ರತಿದಿನ ಸಾಮಾಜಿಕ‌ ಜಾಲತಾಣಗಳ ಮೂಲಕ ನಡೆಯುತ್ತಿರುವ ಕ್ರೈಮ್, ವಂಚನೆಯ ಬಗ್ಗೆ ‘ಇವನೇ ಶ್ರೀನಿವಾಸ’ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ಮೋಹನ್ ಜುನೇಜಾ ಅವರು ನಟಿಸಿದ ಕೊನೆಯ ಚಿತ್ರವಿದು. ಚಿಲ್ಲರ್ ಮಂಜು, ಸುಶ್ಮಿತಾ ಮುಂತಾದವರು ನಟಿಸಿದ್ದಾರೆ’ ಎಂದರು.

ನಮ್ಮ ವೈಯಕ್ತಿಕ ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಬಾರದು ಎನ್ನುವ ಕುಮಾರ್‍, ‘ಇದರಿಂದ ನಮ್ಮ ಮಾಹಿತಿ ತಿಳಿದುಕೊಳ್ಳುವ ವಂಚಕರು ಕಿರುಕುಳ, ತೊಂದರೆ ಕೊಡುತ್ತಾರೆ. ನಮ್ಮ ವೈಯಕ್ತಿಕ ವಿಚಾರ ನಮ್ಮಲ್ಲೇ ಇರಬೇಕು. ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಬಾರದು ಎಂಬುದನ್ನು ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಜನವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ನಾಯಕ ಪ್ರತಾಪ್ ಮಾತನಾಡಿ, ‘ನಾನೊಬ್ಬ ಪೌರ ಕಾರ್ಮಿಕ. ಹಿಂದೆ ನಾಟಕಗಳಲ್ಲಿ ನಟಿಸುತ್ತಿದ್ದೆ. ಈ ಚಿತ್ರದ ನಾಯಕನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೇನೆ. ಶ್ರೀನಿವಾಸ ಯಾರು, ಎನ್ನುವುದೇ ಈ ಚಿತ್ರದ ಕಥೆ. ನಮ್ಮ ಸಿನಿಮಾದ ಮೂಲಕ ಸಮಾಜಕ್ಕೆ ಒಂದು ಸಂದೇಶ ನೀಡಬೇಕೆನ್ನುವುದು ನಮ್ಮ ಉದ್ದೇಶ’ ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

18 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

29 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

1 hour ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago