saalu marada thimakka
ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನವನ್ನು ಅವರು ತೆರೆಯ ಮೇಲೆ ತರುವುದಕ್ಕೆ ಸಜ್ಜಾಗಿದ್ದಾರೆ.
ವೃಕ್ಷಗಳನ್ನೇ ಮಕ್ಕಳನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತು ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಎಂಬ ಕೃತಿಯನ್ನು ರಚಿಸಿದ್ದು, ಈ ಚಿತ್ರವು ಆ ಕೃತಿಯನ್ನು ಆಧರಿಸಿದೆ.
ಶ್ರೀ ಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.
ಶ್ರೀ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಸೌಜನ್ಯ, ತಿಮ್ಮಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ‘ರಾಜಹುಲಿ’, ‘ಕೋರ’ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದ್ದ ಸೌಜನ್ಯ, ಇದೇ ಮೊದಲ ಬಾರಿಗೆ ತಿಮ್ಮಕ್ಕನಾಗಿ ನಟಿಸುತ್ತಿದ್ದಾರೆ. ನೀನಾಸಂ ಅಶ್ವಥ್, ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ. ಮಠ, ಗಣೇಶ್ ಕೇಸರ್ಕರ್, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರಕ್ಕೆ ನಾಗರಾಜ್ ಛಾಯಾಗ್ರಹಣ, ಶ್ಯಾಮ್ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಶ್ರೀ ಜೊತೆಯಾಗಿ ರಚಿಸಿದ್ದಾರೆ.
‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಚಿತ್ರಕ್ಕಾಗಿ ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದೆ. ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರೀಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…